ಬೆಂಗಳೂರು Prajakiran.com : ರಾಜ್ಯದಲ್ಲಿಂದು ಪಾಸಿಟಿವ್ ರೇಟ್ ಮತ್ತಷ್ಟು ಕಡಿಮೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 7810 ಕೊರೋನಾ ಪ್ರಕರಣಗಳು ದೃಢಪಟ್ಟಿದೆ.
ಆದರೆ ಇಂದು ಸೋಂಕಿಗೆ ಬಲಿಯಾದವರ ಸಂಖ್ಯೆ ಮಾತ್ರ 125 ಇದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 7810 ಸೋಂಕಿತರು ಪತ್ತೆಯಾಗಿದ್ದಾರೆ.
ಸೋಂಕಿನಿಂದ ಚೇತರಿಸಿಕೊಂಡವರು 18648. ಇದರೊಂದಿಗೆ ಕೊರೋನಾ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 25,51,365ಕ್ಕೆ ಏರಿಕೆಯಾಗಿದೆ.
ಇನ್ನೂ ಕೊರೋನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದ್ದರೂ ಸೋಂಕಿಗೆ ಬಲಿಯಾದರ ಸಂಖ್ಯೆಯು ಸ್ಥಿರವಾಗಿದೆ.
ಇಂದು 125 ಮಂದಿ ಕೋವಿಡ್ ನಿಂದ ಅಸುನೀಗಿದ್ದಾರೆ.
ಆ ಮೂಲಕ ರಾಜ್ಯದಲ್ಲಿ ಈವರೆಗೆ 32, 913 ಜನ ಸಾವನ್ನಪ್ಪಿದ್ದಾರೆ ಎಂದು ವಿವರಿಸಲಾಗಿದೆ.
27,65,134 ಈವರೆಗೆ ಒಟ್ಟು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ