ರಾಜ್ಯ

ರಾಜ್ಯದಲ್ಲಿ ಗುರುವಾರ ಕರೋನಾಕ್ಕೆ 104 ಸಾವು, 4169 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 104  ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 4169 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ          51422 ಕ್ಕೆ ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 1263 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  19729 ಜನ ಗುಣಮುಖರಾಗಿದ್ದು,   30655 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 539 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಗುರುವಾರವೂ 104 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 1032ಕ್ಕೆ ಏರಿಕೆಯಾದಂತಾಗಿದೆ.

ಗುರುವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೇ  1975  ಜನ ಸೋಂಕಿತರಿದ್ದರೆ ಇಂದು ಬರೋಬ್ಬರಿ 2344  ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

 ಇನ್ನೂಳಿದಂತೆ  ದಕ್ಷಿಣ ಕನ್ನಡ 238, ಧಾರವಾಡ176, ವಿಜಯಪುರ 144, ಮೈಸೂರು 130, ಕಲಬುರಗಿ 123, ಉಡುಪಿ 113, ರಾಯಚೂರು 101, ಬೆಳಗಾವಿ 92, ಉತ್ತರಕನ್ನಡ 79, ಚಿಕ್ಕಬಳ್ಳಾಪುರ 77, ಬೀದರ 53, ಶಿವಮೊಗ್ಗ 46, ಬಳ್ಳಾರಿ ಹಾಗೂ ಗದಗ ತಲಾ 44, ಕೋಲಾರ 43, ಬಾಗಲಕೋಟೆ 39, ಯಾದಗಿರಿ 34, ಕೊಪ್ಪಳ 32, ಹಾಸನ ಹಾಗೂ ಬೆಂಗಳೂರು ಗ್ರಾಮಾಂತರ ತಲಾ 31, ಚಿಕ್ಕಮಗಳೂರು 30, ದಾವಣಗೆರೆ 25, ಚಿತ್ರದುರ್ಗ 21, ಹಾವೇರಿ ಹಾಗೂ ಕೊಡಗು ತಲಾ 18, ಚಾಮರಾಜನಗರ 16, ತುಮಕೂರು 12, ಮಂಡ್ಯ 11, ರಾಮನಗರ 4 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಗುರುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 70 ಜನ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ 7, ಕೋಲಾರ 6, ಬಾಗಲಕೋಟೆ 5, ಬಳ್ಳಾರಿ 4,  ಮೈಸೂರು ಹಾಗೂ ಬೆಳಗಾವಿ 3, ಬೀದರ, ಹಾಸನ ತಲಾ 2, ಮಂಡ್ಯ ಹಾಗೂ ಕಲಬುರುಗಿಯಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *