ರಾಜ್ಯ

ರಾಜ್ಯದಲ್ಲಿಂದು ಕೋವಿಡ್‌ಗೆ 180 ಜನ ಬಲಿ….!

ಬೆಂಗಳೂರು prajakiran.com : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 31830 ಹೊಸ ಪ್ರಕರಣಗಳು ದಾಖಲಾಗಿವೆ.

ಈ ಮೂಲಕ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 301899ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ ರಾಜ್ಯದಲ್ಲಿ 180 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.

ವಿಜಯಪುರದಲ್ಲಿಂದು 536 ಮಂದಿಗೆ ಕೊರೋನಾ ದೃಢ

ವಿಜಯಪುರ Prajakiran.com :
ಜಿಲ್ಲೆಯಲ್ಲಿ ಇಂದು 536 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 377 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 229 ಕ್ಕೆ ಏರಿಕೆಯಾಗಿದೆ.

ನಗರದಲ್ಲಿ 250, ವಿಜಯಪುರ ಗ್ರಾಮೀಣ 21, ಬಬಲೇಶ್ವರ 19, ತಿಕೋಟಾ 1, ಬಸವನಬಾಗೇವಾಡಿ 31, ಕೊಲ್ಹಾರ 7, ನಿಡಗುಂದಿ 14, ಇಂಡಿ 33, ಚಡಚಣ 2, ಮುದ್ದೇಬಿಹಾಳ 43, ತಾಳಿಕೋಟೆ 2, ಸಿಂದಗಿ 95, ದೇವರಹಿಪ್ಪರಗಿ 16 ಹಾಗೂ ಇತರೆ ಜಿಲ್ಲೆಯ ಇಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *