ರಾಜ್ಯ

ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ

ಬೆಂಗಳೂರು prajakiran.com : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ರದ್ದು ಮಾಡಿ ಆದೇಶ ಹೊರಡಿಸಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ರಾಜ್ಯದ ಬಿಜೆಪಿ ಸರಕಾರ ಆದೇಶವನ್ನು ಪರಿಷ್ಕೃತಗೊಳಿಸಿದೆ.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.

ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿನಯಪೂರ್ವಕ ವಿನಂತಿಮಾಡಿದ್ದಾರೆ.

ಸರಕಾರದ ಮಾರ್ಗಸೂಚಿಗಳು ಇಂತಿವೆ.

 ಗಣೇಶ ಚತುರ್ಥಿಯನ್ನು ಸರಳವಾಗಿ, ಭಕ್ತಿಪೂರ್ವಕವಾಗಿ ಖಾಸಗಿ/ಸರಕಾರಿ/ ಸಾರ್ವಜನಿಕ ಸ್ಥಳದಲ್ಲಿ ಗಣೇಶೋತ್ಸವ ಆಚರಣೆಗೆ ಕನಿಷ್ಟ ಸಂಖ್ಯೆಯ ಜನ ಸೇರಬೇಕು.

ಸಾರ್ವಜನಿಕ ಸ್ಥಳದಲ್ಲಿ 4 ಅಡಿ ಮೀರದಂತೆ ಗಣೇಶ ಪ್ರತಿಷ್ಠಾಪನೆ ಮಾಡಿ. ಮನೆಯಲ್ಲಿ 2 ಅಡಿ ಮೀರದಂತೆ ಪ್ರತಿಷ್ಠಾಪಿಸಿ

ಗಣೇಶಮಂಡಳಿಗಳು ಸ್ಥಳೀಯ ಮಹಾನಗರಪಾಲಿಕೆ, ನಗರ ಪಾಲಿಕೆ, ಪುರಸಭೆ ಪರವಾನಿಗೆ ಪಡೆಯತಕ್ಕದ್ದು. ಒಂದು ವಾರ್ಡಿಗೆ/ ಒಂದು ಗ್ರಾಮಕ್ಕೆ ಒಂದು ಪ್ರೋತ್ಸಾಹಿಸುವುದು.

ಇಂತಹ ಸ್ಥಳದಲ್ಲಿ 20 ಜನ ಸೇರಲು ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮಲೆ 20ಕ್ಕಿಂತ ಹೆಚ್ಚು ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು

ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಮನೋರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲ.

ಗಣೇಶ ತರುವಾಗ ಮತ್ತು ವಿಸರ್ಜಿಸುವಾಗ ಯಾವುದೇ ಮೆರವಣಿಗೆಗೆ ಅವಕಾಶವಿಲ್ಲ. ಸಂಪೂರ್ಣ ನಿರ್ಬಂಧಿಸಲಾಗಿದೆ.

ವಿಸರ್ಜನೆ ಸಮೀಪದ ಹೊಂಡ, ಟ್ಯಾಂಕ್ ಇಲ್ಲವೇ ಮಹಾನಗರ ಪಾಲಿಕೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದ ಸ್ಥಳದಲ್ಲಿ ಮಾಡುವುದು

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *