ರಾಜ್ಯ

ರಾಜ್ಯದ 49 ಹೊಸ ತಾಲೂಕುಗಳಿಗೆ ಬಿಇಒ ನೇಮಿಸಿ

ಹುಬ್ಬಳ್ಳಿ prajakiran.com : ರಾಜ್ಯದ 49 ಹೊಸತಾಲೂಕುಗಳಿಗೆ ತಕ್ಷಣವೇ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇಮಿಸಬೇಕು ಎಂದು ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷಅಶೋಕ ಸಜ್ಜನ ಮನವಿ ಮಾಡಿದ್ದಾರೆ.

ಈಗಾಗಲೇ ಹೊಸದಾಗಿ  ಮಂಜೂರಾಗಿರುವ ತಾಲೂಕುಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಅನುಷ್ಠಾನ ಗೊಳಿಸುವುದಕ್ಕಾಗಿ, ವಿಶೇಷವಾಗಿ ಗ್ರಾಮೀಣ ಭಾಗದ  ಶಾಲೆಗಳಿಗೆ ಇನ್ನೂ ಹೆಚ್ಚಿನ ಅಭಿವೃದ್ಧಿಪರ ದೆಸೆಯಲ್ಲಿ ಸಾಗಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶಕುಮಾರ್ ಕೂಡಲೇ ಹೊಸ ಕ್ಷೇತ್ರಶಿಕ್ಷಣಾಧಿಕಾರಿಗಳ ಹುದ್ದೆಗಳನ್ನು ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಡಳಿತಾತ್ಮಕ ಕೆಲಸ ಕಾರ್ಯಗಳ ಜೊತೆಗೆ ಶೈಕ್ಷಣಿಕವಾಗಿ ಮಕ್ಕಳ ಶಿಕ್ಷಣದ ಸಾರ್ವತ್ರೀಕರಣಕ್ಕಾಗಿ ಇದು ಅತ್ಯಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೇರೆ ಬೇರೆ ಇಲಾಖೆಗೆ ನೇಮಿಸಿರುವಂತೆ ನಮ್ಮ ಶಿಕ್ಷಣ ಇಲಾಖೆಗೆ ಆದಷ್ಟು ಶೀಘ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇಮಿಸಿ ಕಾರ್ಯಾಲಯಗಳನ್ನು ಪ್ರಾರಂಭಿಸಬೇಕು. ಅವರಿಗೆ ಅಗತ್ಯ ಸಿಬ್ಬಂದಿಯನ್ನು ಒದಗಿಸಲು ಅಗತ್ಯ ಕ್ರಮ ಜರುಗಿಸಬೇಕೆಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *