ರಾಜ್ಯ

ರಾಜ್ಯದಲ್ಲಿ ಮಂಗಳವಾರ 8161 ಕರೋನಾ, 148 ಸಾವು

ರಾಜ್ಯದಲ್ಲಿ  6814 ಜನ ಬಿಡುಗಡೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  148 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 8161 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 2,91,826ಕ್ಕೆ  ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 6814 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,04,439 ಜನ ಗುಣಮುಖರಾಗಿದ್ದು, 82,410 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  751 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ 148 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 4,958ಕ್ಕೆ ಏರಿಕೆಯಾದಂತಾಗಿದೆ.

ಮಂಗಳವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ಬರೋಬ್ಬರಿ 2294 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ ಬಾಗಲಕೋಟೆ 83, ಬಳ್ಳಾರಿ 551, ಬೆಳಗಾವಿ 298, ಬೆಂಗಳೂರು ಗ್ರಾಮಾಂತರ 63, ಬೀದರ 61, ಚಾಮರಾಜನಗರ 17, ಚಿಕ್ಕಬಳ್ಳಾಪುರ 93, ಚಿಕ್ಕಮಗಳೂರು 88, ಚಿತ್ರದುರ್ಗ 114, ದಕ್ಷಿಣ ಕನ್ನಡ 247,  ದಾವಣಗೆರೆ 318, ಧಾರವಾಡ 204, ಗದಗ 175, ಹಾಸನ 205, ಹಾವೇರಿ 78, ಕಲಬುರಗಿ 227, ಕೊಡಗು 8, ಕೋಲಾರ 47, ಕೊಪ್ಪಳ 238, ಮಂಡ್ಯ 153, ಮೈಸೂರು 1331, ರಾಯಚೂರು 88, ರಾಮನಗರ 56, ಶಿವಮೊಗ್ಗ 276, ತುಮಕೂರು 223, ಉಡುಪಿ 217, ಉತ್ತರಕನ್ನಡ 141, ವಿಜಯಪುರ 135, ಯಾದಗಿರಿ 132 ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 61, ಮೈಸೂರು 16, ಧಾರವಾಡ 8, ಕೊಪ್ಪಳ ಹಾಗೂ ಬಳ್ಳಾರಿ ತಲಾ 6, ಹಾವೇರಿ, ದಾವಣಗೆರೆ ಹಾಗೂ ಶಿವಮೊಗ್ಗ ತಲಾ 5,  ತುಮಕೂರು ಹಾಗೂ ವಿಜಯಪುರ ತಲಾ 4, ಚಿತ್ರದುರ್ಗ, ದಕ್ಷಿಣಕನ್ನಡ, ಕಲಬುರಗಿ ಹಾಗೂ ಉತ್ತರಕನ್ನಡ ತಲಾ 3, ಬೆಳಗಾವಿ, ಚಾಮರಾಜನಗರ, ಹಾಸನ  ಕೋಲಾರ, ಮಂಡ್ಯ ಹಾಗೂ ಉಡುಪಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಗದಗ, ರಾಮನಗರ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *