ರಾಜ್ಯ

ರಾಜ್ಯದಲ್ಲಿ ಮಂಗಳವಾರ 9058 ಕರೋನಾ, 135 ಸಾವು

ರಾಜ್ಯದಲ್ಲಿ  5159 ಜನ ಬಿಡುಗಡೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  135ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 9058 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,51,481ಕ್ಕೆ  ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ 5159 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,54,626 ಜನ ಗುಣಮುಖರಾಗಿದ್ದು,    90,999 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ 135 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 5837ಕ್ಕೆ ಏರಿಕೆಯಾದಂತಾಗಿದೆ.

ಮಂಗಳವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ಬರೋಬ್ಬರಿ 2867ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ ಬಾಗಲಕೋಟೆ 136, ಬಳ್ಳಾರಿ 393, ಬೆಳಗಾವಿ 316, ಬೆಂಗಳೂರು ಗ್ರಾಮಾಂತರ 145, ಬೀದರ 63, ಚಾಮರಾಜನಗರ 49, ಚಿಕ್ಕಬಳ್ಳಾಪುರ 106, ಚಿಕ್ಕಮಗಳೂರು 210, ಚಿತ್ರದುರ್ಗ 164, ದಕ್ಷಿಣ ಕನ್ನಡ 352,  ದಾವಣಗೆರೆ 289, ಧಾರವಾಡ 199, ಗದಗ 194, ಹಾಸನ 461, ಹಾವೇರಿ 153, ಕಲಬುರಗಿ 220, ಕೊಡಗು 54, ಕೋಲಾರ 64, ಕೊಪ್ಪಳ 195, ಮಂಡ್ಯ 197, ಮೈಸೂರು 737, ರಾಯಚೂರು 245, ರಾಮನಗರ 105, ಶಿವಮೊಗ್ಗ 233, ತುಮಕೂರು 327, ಉಡುಪಿ 161, ಉತ್ತರಕನ್ನಡ 114, ವಿಜಯಪುರ 67, ಯಾದಗಿರಿ 142   ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಶುಕ್ರವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ  40,   ಮೈಸೂರು 12,  ಹಾಸನ 11, ಶಿವಮೊಗ್ಗ 10, ಬೆಳಗಾವಿ, ದಕ್ಷಿಣ ಕನ್ನಡ ತಲಾ 7, ಬಳ್ಳಾರಿ, ದಾವಣಗೆರೆ, ಕಲಬುರಗಿ, ಕೊಪ್ಪಳ ಹಾಗೂ ವಿಜಯಪುರ ತಲಾ 4, ತುಮಕೂರು, ರಾಯಚೂರು ತಲಾ 3, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಹಾಗೂ ಉಡುಪಿ ತಲಾ 2, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಉತ್ತರಕನ್ನಡ ಹಾಗೂ ಯಾದಗಿರಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *