ರಾಜ್ಯ

ರಾಜ್ಯದಲ್ಲಿ ಮಂಗಳವಾರ 7665 ಕೊರೋನಾ, 139 ಸಾವು

ರಾಜ್ಯದಲ್ಲಿ ಜನ 8387 ಬಿಡುಗಡೆ

ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 139 ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 7665 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ   2,40,948  ಕ್ಕೆ  ಏರಿಕೆಯಾಗಿದೆ.

 ಇಂದು ರಾಜ್ಯದಲ್ಲಿ  8387 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 1,56,949ಜನ ಗುಣಮುಖರಾಗಿದ್ದು,  79,782 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

697 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಮಂಗಳವಾರವೂ 139 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 4201ಕ್ಕೆ ಏರಿಕೆಯಾದಂತಾಗಿದೆ.

ಮಂಗಳವಾರ ಪತ್ತೆಯಾದ ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.

ಬೆಂಗಳೂರಿನಲ್ಲಿ ಬರೋಬ್ಬರಿ 2242 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

ಇನ್ನೂಳಿದಂತೆ ಬಳ್ಳಾರಿ 673, ಉಡುಪಿ 421, ಬೆಳಗಾವಿ 395, ಮೈಸೂರು 357, ದಾವಣಗೆರೆ 332, ಶಿವಮೊಗ್ಗ 318, ದಕ್ಷಿಣ ಕನ್ನಡ ಹಾಗೂ ಧಾರವಾಡ 279, ಕಲಬರುಗಿ 229, ಗದಗ 186, ಹಾಸನ 177, ಮಂಡ್ಯ 174, ರಾಯಚೂರು ಹಾಗೂ ಬಾಗಲಕೋಟೆ 171, ಚಿಕ್ಕಮಗಳೂರು 145, ಕೊಪ್ಪಳ 142, ಬೆಂಗಳೂರು ಗ್ರಾಮಾಂತರ 123, ರಾಮನಗರ 115, ಹಾವೇರಿ 109, ಯಾದಗಿರಿ 107,ಬೀದರ 99, ಚಿಕ್ಕಬಳ್ಳಾಪುರ 82, ಉತ್ತರಕನ್ನಡ 80, ಕೋಲಾರ 71, ವಿಜಯಪುರ 64, ತುಮಕೂರ 46, ಚಿತ್ರದುರ್ಗ 41, ಚಾಮರಾಜನಗರ 21, ಕೊಡಗು 16  ಹೀಗೆ ಒಟ್ಟು 30 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಮಂಗಳವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 49 ಜನ ಸಾವನ್ನಪ್ಪಿದ್ದಾರೆ.

 ಧಾರವಾಡ 10, ಬಳ್ಳಾರಿ ಹಾಗೂ ದಕ್ಷಿಣ ಕನ್ನಡ ತಲಾ 9, ಬೀದರ 8, ಹಾಸನ ಹಾಗೂ ಬೆಳಗಾವಿ ತಲಾ 7, ಮೈಸೂರು 6, ತುಮಕೂರು, ರಾಯಚೂರು ತಲಾ 4, ಬೆಂಗಳೂರು ಗ್ರಾಮಾಂತರ, ಹಾವೇರಿ, ಶಿವಮೊಗ್ಗ, ವಿಜಯಪುರ ಹಾಗೂ ಯಾದಗಿರಿ ತಲಾ 3, ಮಂಡ್ಯ, ಕಲಬುರಗಿ, ಗದಗ ತಲಾ 2, ಬಾಗಲಕೋಟೆ, ಚಾಮರಾಜನಗರ, ದಾವಣಗೆರೆ, ಕೊಪ್ಪಳ, ಉತ್ತರಕನ್ನಡ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *