ರಾಜ್ಯ

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ನಾಗರಾಜ ಕಿರಣಗಿ ನಾಮಪತ್ರ ಸಲ್ಲಿಕೆ

ಧಾರವಾಡ prajakiran.com : ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ನಾಗರಾಜ ಕಿರಣಗಿ ಅವರು ಬುಧವಾರ ತಮ್ಮ ಅಪಾರ ಬೆಂಬಲಿಗರು, ಜಯ ಕರ್ನಾಟಕ, ದಲಿತ ಸಂಘರ್ಷ ಸಮಿತಿ, ಜನಜಾಗೃತಿ ಸಂಘ, ರೈತ ಹಿತರಕ್ಷಣಾ ಪರಿವಾರ ಸಂಘಟನೆಯ ಜೊತೆಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಇಲ್ಲಿನ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಿಂದ ಪಾದಯಾತ್ರೆ ಮೂಲಕ ತಹಶೀಲದಾರ ಕಚೇರಿಗೆ ತೆರಳಿ ಉಪ ತಹಶಿಲ್ದಾರ ಎಸ್.ಪಿ.ಹೆಬ್ಬಳ್ಳಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ, ಜನಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಜಿಲ್ಲಾ ಜೆಡಿಯು ಅಧ್ಯಕ್ಷ ಶ್ರೀಶೈಲಗೌಡ ಕಮತರ, ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ಶಂಕರ ಗಂಗಣ್ಣವರ, ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸುಧೀರ ಮುಧೋಳ, ಶಿಕ್ಷಕರ ಸಂಘಟನೆಯ ಅಧ್ಯಕ್ಷ ನಾರಾಯಣ ಭಜಂತ್ರಿ, ಹಿರಿಯ ಕಲಾವಿದ ಮಂಜುನಾಥ ಹಿರೇಮಠ, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮಣ ದೊಡ್ಡಮನಿ, ಪತ್ರಕರ್ತರಾದ ನರಸಿಂಹಮೂರ್ತಿ ಪ್ಯಾಟಿ, ಪುಂಡಲೀಕ ಹಡಪದ, ಮಂಜುನಾಥ ಕವಳಿ ಸೇರಿದಂತೆ ವಿವಿಧ ಸಂಘಟನೆಯ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *