ಧಾರವಾಡ prajakiran. com : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ ಮಾಡಿದ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಮಂಗಳವಾರ ನಡೆದಿದೆ.
ಪ್ರಕಾಶ ದೇಶದ (48) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈತ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ.
ಬೆಳಗ್ಗೆ ಕೊಲೆ ನಡೆದಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ
ಜಮೀನಿಗೆ ರೈತರು ಬಂದಾಗ ಶವ
ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಅರಿತು ಘಟನಾ ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.