ರಾಜ್ಯ

ಕೆಸಿಡಿಯಲ್ಲಿ ರೋಸ್ಟರ್ ಪದ್ಧತಿ ಗಾಳಿಗೆ ತೂರಿ ಪ್ರವೇಶಾತಿ

ಧಾರವಾಡ ಪ್ರಜಾಕಿರಣ.ಕಾಮ್ : ಧಾರವಾಡದ ಕರ್ನಾಟಕ ಮಹಾವಿದ್ಯಾಲಯದಲ್ಲಿ ರೋಸ್ಟರ್ ಪದ್ಧತಿ ಗಾಳಿಗೆ ತೂರಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಸುರೇಶ ಕೋರಿ ನೇತೃತ್ವದಲ್ಲಿ ಶುಕ್ರವಾರ ಮಧ್ಯಾಹ್ನದಿಂದ ರಾತ್ರಿಯವರೆಗೆ ಮಿಂಚಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಅರ್ಹತೆಯುಳ್ಳ ವಿದ್ಯಾರ್ಥಿಗಳಿಗೆ ಪ್ರವೇಶಾತಿಯನ್ನು ನಿರಾಕರಿಸುತ್ತಿರುವ ಆಡಳಿತ ಮಂಡಳಿ,
ಹೈದ್ರಬಾದ ಕರ್ನಾಟಕ ಮೀಸಲಾತಿಯನ್ನು ಪರಿಗಣಿಸದೆ ಇರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಇದಲ್ಲದೆ, ಹೆಚ್ಚಿನ ಸಂಖ್ಯೆಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ.

ವಿದ್ಯಾರ್ಥಿಗಳ ಹೆಚ್ಚು ಬೇಡಿಕೆಯಿರುವ ವಿಷಯಗಳ ಸೀಟುಗಳನ್ನು ಶೇ. 75ರಷ್ಟು ಹೆಚ್ಚಿಸಬೇಕು.

ಆಯ್ಕೆ ಮಾಡಿದ ವಿಷಯಗಳನ್ನು ಹೊರತುಪಡಿಸಿ ವಿದ್ಯಾರ್ಥಿಗಳಿಗೆ ಸಂಬಂಧವೇ ಇರದ ವಿಷಯಗಳನ್ನು ಕೊಡುತ್ತಿರುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸುತ್ತಿನ ಮೆರಿಟ್ ಆಧಾರಿತ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಅರ್ಜಿ ಸಲ್ಲಿಸಿದ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಆಯ್ಕೆಗೆ ಒಂದು ವಿಷಯದ ಅವಕಾಶ ಬಿಟ್ಟು ನಾಲ್ಕರಿಂದ ಐದು ವಿಷಯಗಳನ್ನು ಆಯ್ದುಕೊಳ್ಳಲು ಅವಕಾಶವನ್ನು ನೀಡಬೇಕು.

ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸದೇ ಆದೇಶವನ್ನು ಹೊರಡಿಸುವುದರ ಮೂಲಕ ಖಚಿತಪಡಿಸದೇ ವಿಳಂಬ ನೀತಿಯನ್ನು ಅನುಸರಿಸಿದರೆ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲು ಈಗಾಗಲೇ ತಯಾರಿ ಮಾಡಿಕೊಂಡಿದ್ದೇವೆಂದು ಈ ಮೂಲಕ ತಮ್ಮ ಗಮನಕ್ಕೆ ತರಬಯಸುತ್ತೇವೆ ಎಂದು ಸಾಮಾಜಿಕ ಕಾರ್ಯಕರ್ತ ಸುರೇಶ ಕೋರಿ ಎಚ್ಚರಿಸಿದ್ದಾರೆ.

ಪ್ರತಿಭಟನೆಯಲ್ಲಿ ಧಾರವಾಡ ಎಸ್ ಎಫ್ ಐ ಜಿಲ್ಲಾಧ್ಯಕ್ಷ
ನಾಗರಾಜ್ ಛಲವಾದಿ, ವಕೀಲರಾದ
ವಿಜಯಾನಂದ ಜಾದವ್, ಮಂಜುನಾಥ್ ಹರಿಜನ,
ಸಾಮಾಜಿಕ ಕಾರ್ಯಕರ್ತರಾದ
ಶಿವರಾಜ್ ಮೋತಿ,
ಮಂಜುನಾಥ ಮಸ್ಕಿ, ರಮೇಶ್ ನಾದಿಗಟ್ಟಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *