ಬೆಂಗಳೂರು prajakiran.com : ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಹಾಗೂ ವಿತರಕರಾಗಿದ್ದ ಕೆ.ಸಿ.ಎನ್ ಚಂದ್ರಶೇಖರ್ ನಿಧನರಾಗಿದ್ದಾರೆ.
ಅವರು ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ಅವರಿಗೆ 69 ವರ್ಷ ವಯಸ್ಸಾಗಿತ್ತು.
ಚಂದ್ರು ಅವರು ವರನಟ ಡಾ. ರಾಜ್ ಕುಮಾರ ನಟಿಸಿರುವ ಹುಲಿ ಹಾಲಿನ ಮೇವು, .ಬಬ್ರುವಾಹನ ಸೇರಿದಂತೆ ಹಲವು ಸಿನಿಮಾ ನಿರ್ಮಾಣದ ಮೂಲಕ ನಾಡಿನ ಮನೆ ಮಾತಾಗಿದ್ದರು.
ಕರ್ನಾಟಕ ಫಿಲಂ ಛೇಂಬರ್ ಹಾಗೂ SIFCCRIPನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆಗೆ ಚಿತ್ರರಂಗದ ಅನೇಕ ಬನಟ,ನಟಿಯರು, ಗಣ್ಯರು ಕಂಬನಿ ಮಿಡಿದಿದ್ದಾರೆ.