ತಿರುವನಂತಪುರಂ prajakiran.com : ಕೇರಳದಲ್ಲಿ ಝಿಕಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಇಂದು ಒಂದು ಝಿಕಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಝಿಕಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಇದುವರೆಗೆ ಕೇರಳದಲ್ಲಿ 15 ಮಂದಿಗೆ ಝಿಕಾ ವೈರಸ್ ಸೋಂಕು ದೃಢ ಪಟ್ಟಿದೆ. ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಕಾಳಜಿ ವಹಿಸಬೇಕು ಎಂದು ಸಾರ್ವಜನಿಕ ಆರೋಗ್ಯ ತಜ್ಞ ಡಾ. ಮ್ಯಾಥ್ಯೂ ವರ್ಗೀಸ್ ಹೇಳಿದ್ದಾರೆ.
ಕೇರಳದ ಎಲ್ಲಾ ಜಿಲ್ಲೆಗಳಲ್ಲಿಯೂ ಝಿಕಾ ವೈರಸ್ ಹಿನ್ನೆಲೆ ಗರ್ಭಿಣಿಯರ ಬಗ್ಗೆ ವಿಶೇಷ ಕಾಳಜಿ ಮಾಡಲಾಗಿದೆ.