ರಾಜ್ಯ

ಕೆಜಿಎಫ್ ನಲ್ಲಿ ತಯಾರಾಗಲಿದೆ ನಿಮಿಷಕ್ಕೆ 500 ಲೀಟರ್ ಆಕ್ಸಿಜನ್…!

ಕೋಲಾರ prajakiran.com : ನಿಮಿಷಕ್ಕೆ 500 ಲೀಟರ್ ಆಕ್ಸಿಜನ್ ಉತ್ಪಾದನೆ ಮಾಡುವ ಸಾಮರ್ಥ್ಯವಿರುವ ಇಸ್ರೇಲ್ ಆಮ್ಲಜನಕ ಉತ್ಪಾದನ ಘಟಕ ಇಂದಿನಿಂದ ಕೆಜಿಎಫ್ ನಲ್ಲಿ ಕಾರ್ಯಾರಂಭಿಸುತ್ತಿದೆ.

ಈ ಕುರಿತು ಮಾತನಾಡಿದ ಸಂಸದ ಎಸ್. ಮುನಿಸ್ವಾಮಿ, ಕೆಜಿಎಫ್ ನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನ ಘಟಕ ಕಾರ್ಯನಿರ್ವಹಿಸುತ್ತದೆ.

ಕೇಂದ್ರ ಸರ್ಕಾರ ಮಂಜೂರು ಮಾಡಿದ ಆಕ್ಸಿಜನ್ ಘಟಕಗಗಳಲ್ಲಿ ಪ್ರಥಮ ಬಾರಿಗೆ ಈ ಘಟಕಕ್ಕೆ ಚಾಲನೆ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಶೀಘ್ರದಲ್ಲಿ ಆಸ್ಪತ್ರೆಗಳಲ್ಲಿ ಆಮ್ಲಜನಕಯುಕ್ತ ವಾರ್ಡ್‌ಗಳನ್ನು ಪ್ರಾರಂಭಿಸಲಾಗುವುದು.

ಈಗಾಗಲೇ 170 ಹಾಸಿಗೆಗಳು ಬಿಜಿಎಂಎಲ್ ಆಸ್ಪತ್ರೆಯಲ್ಲಿ ಸಿದ್ಧವಾಗಿದ್ದು, ಕೊಯಮತ್ತೂರಿನಲ್ಲಿ ಯಂತ್ರೋಪಕರಣ ಸಾಗಾಣಿಕೆಗೆ ಸಾಧ್ಯವಾಗದಿದ್ದರೆ ಅದನ್ನು ನಮ್ಮ ಸ್ವಂತ ವೆಚ್ಚದಲ್ಲಿ ತರಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *