ಅಂತಾರಾಷ್ಟ್ರೀಯ

ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತುಹಾಕಿ ಜನಪರ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ ಎಂದ ಖರ್ಗೆ

 ಧಾರವಾಡ ಪ್ರಜಾಕಿರಣ.ಕಾಮ್ : ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಕರ್ನಾಟಕದಲ್ಲಿ ಭಾಗ್ಯಗಳ ಸರಕಾರವನ್ನು ಮತ್ತೊಮ್ಮೆ ತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಅವರು ಕಡಪಾ ಮೈದಾನದಲ್ಲಿ ಬುಧವಾರ ಸಂಜೆ ನಡೆದ ಹುಬ್ಬಳ್ಳಿ -ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ 74ರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಈಡೇರಿಸುವುದರ ಕುರಿತು ಭರವಸೆ ನೀಡಿದರು.

ಅಲ್ಲದೆ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ ಜನಪರ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

 ಈ ಸಂದರ್ಭದಲ್ಲಿ  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್,  ಧಾರವಾಡ ಪಶ್ಚಿಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ದೀಪಕ್ ಚಿಂಚೋರೆ, ಎಐಸಿಸಿ ಕಾರ್ಯದರ್ಶಿಗಳಾದ ವಿಷ್ಣುವರ್ಧನ್, ಕೆಪಿಸಿಸಿ ಉಪಾಧ್ಯಕ್ಷರಾದ ಪಿವಿ ಮೋಹನ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *