ಅಪರಾಧ

ದಾಂಡೇಲಿ, ಬೆಳಗಾವಿ ಮೂಲದ ಖೋಟಾ ನೋಟು ದಂಧೆಯ ಆರು ಖದೀಮರ ಹೆಡೆಮುರಿ ಕಟ್ಟಿದ ಪೊಲೀಸರು

ದಾಂಡೇಲಿ prajakiran.com : ಖೋಟಾ ನೋಟು ದಂಧೆ ನಡೆಸುತಿದ್ದ ಆರು ಖದೀಮರ ಹೆಡೆಮುರಿಯನ್ನು ಕಟ್ಟುವಲ್ಲಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಖೋಟಾನೋಟು ದಂಧೆಯ 6 ಜನರನ್ನು ಬಂಧಿಸಿ, ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಯಲಾಗಿದೆ‌.

ಬಂಧಿತರನ್ನು ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಎಂದು ಗುರುತಿಸಲಾಗಿದೆ‌.

ದಾಂಡೇಲಿಯ ವನಶ್ರೀ ಭಾಗದ ಶಿವಾಜಿ ಕಾಂಬ್ಳೆಯ ಮನೆಯಲ್ಲಿ 4.5 ಲಕ್ಷ ಅಸಲಿ ನೋಟು ಪಡೆದು 9 ಲಕ್ಷ ನಕಲಿ ನೋಟು ನೀಡಲು ಮುಂದಾಗಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ‌.

ಅಲ್ಲದೆ, ಈ ದಂಧೆಗೆ ಬಳಸಲಾಗಿದ್ದ ಎರಡು ಕಾರು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *