hubli kims
ಜಿಲ್ಲೆ

ಧಾರವಾಡ ಜಿಲ್ಲೆಯಲ್ಲಿ ಭಾನುವಾರವೂ ಕರೋನಾಗೆ 10 ಜನ ಬಲಿ

ನಿಲ್ಲುತ್ತಿಲ್ಲ‌ ಸಾವಿನ ಸರಣಿ

ಜಿಲ್ಲೆಯಲ್ಲಿ ಇಂದು 110 ಜನರ ಬಿಡುಗಡೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗಿದೆ.

ಸೋಂಕಿತರ ಸಂಖ್ಯೆ ಭಾನುವಾರ ಮತ್ತೆ ಸ್ವಲ್ಪ ಕಡಿಮೆಯಾಗಿದೆ.

ಇಂದು ಕೇವಲ 77 ಜನರಿಗೆ ಮಾತ್ರ ಕರೋನಾ ಪಾಸಿಟಿವ್ ಬಂದಿದೆ.

ದುರಂತದ ಸಂಗತಿಯೆಂದರೆ ಇಂದು ಬರೋಬ್ಬರಿ 10 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 8,
ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಹಾಗೂ ನವಲಗುಂದ ತಾಲೂಕಿನ ಆಸ್ಪತ್ರೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.

ಆತಂಕದ ವಿಚಾರವೆಂದರೆ 426 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 978 ಕ್ಕೆ ಎರಿಕೆ ಆಗಿದೆ.

ಸಮಾಧಾನದ ಸಂಗತಿಯೆಂದರೆ ಸೋಂಕಿತರು 110 ಜನರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *