ರಾಜ್ಯ

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ…..!

ಧಾರವಾಡ prajakiran.com :
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ.

ಭಾನುವಾರ ಸಂಜೆ ಜರುಗಿದ ಜಿಲ್ಲಾಧಿಕಾರಿಗಳ ವರ್ಚುವಲ್ ಸಭೆಯಲ್ಲಿ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಈ ಕುರಿತು ಮಾದ್ಯಮ ಮಾಹಿತಿ ನೀಡಿರುವ ಅವರು, ಜಿಲ್ಕೆಯ ಎಲ್ಲ ಸರಕಾರಿ ಹಾಗೂ ಖಾಸಗಿ‌ ಆಸ್ಪತ್ರೆಗಳಲ್ಲಿ ಆಯಾ ದಿನದ ಕೋವಿಡ್ ಚಿಕಿತ್ಸೆ, ಆಕ್ಸಿಜನ್, ಬೆಡ್ ಸೇರಿದಂತೆ ಆಸ್ಪತ್ರೆಗಳ ಅಗತ್ಯತೆ ತಿಳಿಯಲು‌ ಪ್ರತಿ ದಿನ ಸಂಜೆ 6 ಗಂಟೆಗೆ ಜಿಲ್ಲಾಧಿಕಾರಿಗಳು ಆಸ್ಪತ್ರೆ ಮುಖ್ಯಸ್ಥರ ಮತ್ತು ಮುಖ್ಯ ವೈದ್ಯರೊಂದಿಗೆ ವರ್ಚುವಲ್ ಸಭೆ ಜರುಗುಸಿ ಚರ್ಚಿಸುತ್ತಾರೆ.

ಕಿಮ್ಸ್ ಆಸ್ಪತ್ರೆಯ ಇ.ಎನ್.ಟಿ.ವಿಭಾಗ ಮುಖ್ಯಸ್ಥ ಡಾ.ರವೀಂದ್ರ ಗದಗ ಅವರು ಬ್ಲ್ಯಾಕ್ ಫಂಗಸ್ ಪತ್ತೆಯಾಗಿರುವ ಕುರಿತು ವರದಿ ನೀಡಿದ್ದಾರೆ.

ಈವರೆಗೆ ಒಟ್ಟಾರೆ ಹನ್ನೆರಡು ಜನರಲ್ಲಿ ಈ ರೋಗ ಲಕ್ಷಣಗಳು ಇವೆ.

ಇದನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಇದು ಸಾಂಕ್ರಾಮಿಕ ರೋಗವಲ್ಲದರಿಂದ ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ.

ಇಎನ್.ಟಿ ವಿಭಾಗದ ಮುಖ್ಯಸ್ಥ ಡಾ.ರವೀಂದ್ರ ಗದಗ(94481 18494) ಅವರ ನೇತೃತ್ವದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು‌ ಅವರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *