ಕೊಡಗು Prajakiran.com : ಜಿಲ್ಲೆಯಲ್ಲಿ ಬುಧವಾರ 681 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 12 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಒಟ್ಟು ಕೋವಿಡ್ ಸೋಂಕಿತರು ಕಳೆದ 24 ಗಂಟೆಯಲ್ಲಿ 681 ಪ್ರಕರಣಗಳು ಕಂಡುಬಂದಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,813 ರಷ್ಟಾಗಿದೆ.
ಇನ್ನು ಒಂದೇ ದಿನದಲ್ಲಿ 12 ಮಂದಿ ಸಾವಿಗೀಡಾಗುವುದರೊಂದಿಗೆ, ಒಟ್ಟು 145 ಮಂದಿ ಸಾವಿಗೀಡಾದಂತಾಗಿದೆ ಎಂದು ಅವರು ಹೇಳಿದ್ದಾರೆ.