ಕೊಡಗು prajakiran.com : ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಶುಕ್ರವಾರವೂ ಮುಂದುವರೆದಿದೆ.
573 ಹೊಸ ಪ್ರಕರಣಗಳು ವರದಿಯಾಗಿದ್ದು, ಅಲ್ಲದೆ 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5396ರಷ್ಟಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 160ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಮಡಿಕೇರಿ ತಾಲೂಕಿನಲ್ಲಿ 194, ಸೋಮವಾರಪೇಟೆ ತಾಲೂಕಿನಲ್ಲಿ 272 ವೀರಾಜಪೇಟೆ ತಾಲೂಕಿನಲ್ಲಿ 107 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 15055 ರಷ್ಟಾಗಿದ್ದು,
ಕಳೆದ 24ಗಂಟೆಗಳ ಅವಧಿಯಲ್ಲಿ 246 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವುದರೊಂದಿಗೆ ಒಟ್ಟು 9499 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.