ಕೊಡಗು prajakiran.com : ದೇಶದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ.
ರಾಜ್ಯದಲ್ಲೂ ಈಗಾಗಲೇ ಸೋಂಕಿತರ ಸಂಖ್ಯೆ ಹೆಚ್ವು ಇರುವ ಜಿಲ್ಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಅದರಂತೆ ಕೊಡುಗು ಜಿಲ್ಲೆಯಲ್ಲಿಯೂ ಕೊರೋನಾ ತನ್ನ ಆರ್ಭಟವನ್ನು ಮುಂದುವರೆಸಿದೆ.
ಬುಧವಾರ ಒಂದೇ ದಿನ 159 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ.
ಮಡಿಕೇರಿ ತಾಲೂಕಿನಲ್ಲಿ 50, ಸೋಮವಾರಪೇಟೆಯಲ್ಲಿ 56 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 53 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 7182ರಷ್ಟಾಗಿದ್ದು, ಈ ಪೈಕಿ 6526 ಮಂದಿ ಗುಣಮುಖರಾಗಿದ್ದಾರೆ.
567 ಸಕ್ರಿಯ ಪ್ರಕರಣಗಳಿದ್ದು, ಸತ್ತವರ ಸಂಖ್ಯೆಯೂ 86ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 237ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.