ಕೊಡಗು Prajakiran.com : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು ಕಡಿಮೆಯಾಗಿದ್ದು, 12 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಶುಕ್ರವಾರ ಜಿಲ್ಲೆಯಲ್ಲಿ ಹೊಸದಾಗಿ 472 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,270 ರಷ್ಟಾಗಿದೆ.
ವೀರಾಜಪೇಟೆಯಲ್ಲಿ 116, ಮಡಿಕೇರಿಯಲ್ಲಿ 239, ಸೋಮವಾರಪೇಟೆಯಲ್ಲಿ 117 ಹೊಸ ಕೊರೋನಾ ಪ್ರಕರಣಗಳು ಕಂಡುಬಂದಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 669 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಯ, ಇದರೊಂದಿಗೆ ಒಟ್ಟು 14,046 ಮಂದಿ ಗುಣಮುಖರಾದಂತಾಗಿದೆ. ಸಕ್ರಿಯ 5,011 ಪ್ರಕರಣಗಳಿವೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 12 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.