ರಾಜ್ಯ

ಕೊನೆಗೂ ಎಫ್ ಡಿ ಎ ಪರೀಕ್ಷೆ ದಿನಾಂಕ ನಿಗದಿಪಡಿಸಿದ ಕೆಪಿಎಸ್ಸಿ

ಬೆಂಗಳೂರು prajakiran.com : ಕರ್ನಾಟಕ ಲೋಕಸೇವಾ ಆಯೋಗವು ಕೊನೆಗೂ ಎಫ್ ಡಿ ಎ ಪರೀಕ್ಷೆ ದಿನಾಂಕವನ್ನು ಮರು ನಿಗದಿಪಡಿಸಿ ಆದೇಶಿಸಿದೆ.

ಈ ಸಂಬಂಧ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸತ್ಯವತಿ, ಪರೀಕ್ಷೆಯನ್ನು ಫೆ.28ರ ಭಾನುವಾರದಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆ ಮೂಲಕ ರಾಜ್ಯದ ಲಕ್ಷಾಂತರ ಆಕಾಂಕ್ಷಿಗಳಿಗೆ ತುಸು ನೆಮ್ಮದಿಯನ್ನು ನೀಡಿದೆ.

ಈ ಹಿಂದೆ ಜ.24ರಂದು ನಡೆಯಬೇಕಿದ್ದ ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾದ ಹಿನ್ನೆಲೆಯಲ್ಲಿ ಆಯೋಗವು ಪರೀಕ್ಷೆಯನ್ನು ಅನಿರ್ದಿಷ್ಟಾವಧಿವರೆಗೆ ಮುಂದೂಡಿತ್ತು.

ಅಲ್ಲದೆ, ಪ್ರಕರಣದಲ್ಲಿ ಭಾಗಿಯಾದ ಹಲವು ಆರೋಪಿಗಳ ಹೆಡೆಮುರಿ ಕಟ್ಟಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದೀಗ ಫೆಬ್ರುವರಿ 28ರ ಭಾನುವಾರದಂದು ನಡೆಯುವ ಪರೀಕ್ಷೆಗೆ ಯಾವುದೇ ರೀತಿಯ ಅಡೆ ತಡೆ, ತೋಂದರೆ ಬಾರದಂತೆ ಕರ್ನಾಟಕ ಲೋಕಸೇವಾ ಆಯೋಗವು ನೋಡಿಕೊಳ್ಳುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂಬುದು ಅಭ್ಯರ್ಥಿಗಳ ಆಶಯವಾಗಿದೆ.

ಇದಕ್ಕೆ ಕೆ ಪಿ ಎಸ್ಸಿ ಎಷ್ಟರ ಮಟ್ಟಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕೆಲಸವನ್ನು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *