ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಮುಂದೂಡಿಕೆ
ಧಾರವಾಡ prajakiran.com : ಕರ್ನಾಟಕ ವಿಶ್ವವಿದ್ಯಾಲಯವು (ನಾಳೆ) 27-09-2021 ಸೋಮವಾರ ದಂದು ನಡೆಯಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ಪ್ರಕಟಿಸಲಾಗುವದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಚ್ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.