ಬೆಂಗಳೂರು ಪ್ರಜಾಕಿರಣ.ಕಾಮ್ :
ಸಿದ್ದರಾಮಯ್ಯ ಸಿಎಂ ಆದ ತಕ್ಷಣ ತಮ್ಮ ಸಮುದಾಯಕ್ಕೆ ಬಿಗ್ ರಿಲೀಫ್ ನೀಡಿದ್ದಾರೆ.
ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನ ಎಸ್ ಟಿ ಮೀಸಲಾತಿಗೆ
ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ತಮ್ಮ ಸಮುದಾಯಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ.
ಸಿಎಂ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಮಣಿವಣ್ಣನ್ ಪಿ. ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ
ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಏರಿಯಾಗಳಲ್ಲಿ ಇದ್ದ ಕಾಡು ಕುರುಬರನ್ನ ಮಾತ್ರ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು.
ಈಗ ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ.
ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ
ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿಗಳು
ನೇತೃತ್ವದಲ್ಲಿ ಲಕ್ಷಾಂತರ ಜನರು ಈ ಹಿಂದೆ ಪಾದಯಾತ್ರೆಯಲ್ಲಿ ಭಾಗವಹಿಸಿ ಸರ್ಕಾರದ ಗಮನ ಸೆಳೆದಿದ್ದರು.