ರಾಜ್ಯ

ಕೆಯುಡಬ್ಲ್ಯೂಜೆಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು prajakiran. com : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ಎಸ್ ಎಸ್ ಎಲ್‌ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ (ಶೇ.80)ಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.

ರಾಜ್ಯ ಮಟ್ಟದಲ್ಲಿಯೂ ಇದೇ ರೀತಿಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕ‌ ಪಡೆದ ಪತ್ರಕರ್ತರ ಸಂಘದ ಸದಸ್ಯರ ಮಕ್ಕಳಿಗೆ
ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು.

ಈ ಬಗ್ಗೆ ಪ್ರತಿ ಜಿಲ್ಲೆಯಿಂದಲೂ ಶೇ.90 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಹೆಸರುಗಳನ್ನು ಅವರುಗಳ ಅಂಕಪಟ್ಟಿ‌ ಸಹಿತ
ಜೂನ್ ಅಂತ್ಯದೊಳಗೆ
ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ,
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು-09
ಇಲ್ಲಿಗೆ ಕಳುಹಿಸಿಕೊಡಲು ಕೋರಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *