ಅಂತಾರಾಷ್ಟ್ರೀಯ

ರಂಗೇರಿದ ಬೆಳಗಾವಿ ಲೋಕಸಭಾ ಉಪಚುನಾವಣೆ : ಕಾಂಗ್ರೆಸ್ ಗೆ ಕೈ ಕೊಟ್ಟು ಕಮಲ ಮುಡಿಗೇರಿಸಿಕೊಳ್ಳಲು ಸಜ್ಜಾಗಿರುವ ಲಖನ್ …..!

ಬೆಳಗಾವಿ prajakiran.com : ಕೇಂದ್ರದ ಮಾಜಿ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ರಾಜ್ಯದ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಹಲವಾರು ಮುಖಂಡರು ಉಪಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದ್ದಾರೆ.

ಹೀಗಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರ ಸಹೋದರ ಈ ಹಿಂದೆ ಗೋಕಾಕ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ ಲಖನ್ ಜಾರಕಿಹೊಳಿಗೆ ಘಾಳ ಹಾಕುವ ಮೂಲಕ ಶಾಕ್ ನೀಡಿದೆ.

ಲಖನ್ ಜಾರಕಿಹೊಳಿ ಕಾಂಗ್ರೆಸ್
ಪಕ್ಷಕ್ಕೆ ವಿದಾಯ ಹೇಳಿ ಬಿಜೆಪಿ ಸೇರ್ಪಡೆಗೆ ಸಮ್ಮತಿ ನೀಡಿದ್ದಾರೆ.

ಆ ಮೂಲಕ
ಬೆಳಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ
ಸತೀಶ್ ಜಾರಕಿಹೊಳಿಯವರನ್ನು ಸೋಲಿಸಲು ಮುಂದಾಗಿದ್ದಾರೆ‌.

ಈಗಾಗಲೇ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದ ಲಖನ್ ಜಾರಕಿಹೊಳಿ ಕೂಡ ಇದೀಗ ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದು, ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಭೈರತಿ ಬಸವರಾಜ್ ಭೇಟಿಯಾಗಿ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಲಖನ್ ಜಾರಕಿಹೊಳಿ ಬಿಜೆಪಿಗೆ ಬರುವಂತೆ ದೊಡ್ಡವರೆಲ್ಲ ಆಹ್ವಾನ ನೀಡಿದ್ದಾರೆ.

ಸಹೋದರರಾದ ರಮೇಶ್ ಜಾರಕಿಹೊಳಿ ಹಾಗೂ ಬಾಲಚಂದ್ರ ಜಾರಕಿಹೊಳಿ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಪ್ರಕಟಿಸುತ್ತೇನೆ ಎಂದಿದ್ದಾರೆ.

ಜೊತೆಗೆ ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸುತ್ತೇನೆ. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿಗೆ ಯಾಕೆ ಟಿಕೆಟ್ ಕೊಟ್ಟಿದ್ದಾರೆ ಎಂಬುದೇ ಅರ್ಥವಾಗಿಲ್ಲ.

ಹೀಗಾಗಿ ಅವರ ಪರ ಪ್ರಚಾರ ಮಾಡಲು ನನಗೆ ಮುಜುಗರವಾಗುತ್ತದೆ ಎಂದು ಹೇಳಿದ್ದಾರೆ.

ಈ ಹಿಂದೆ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಮೇಶ ಜಾರಕಿಹೊಳಿ ವಿರುದ್ಧ ಲಖನ್ ಜಾರಕಿಹೊಳಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದರು.

ಆಗ ಸತೀಶ್ ಜಾರಕಿಹೊಳಿ ಲಖನ್ ಪರವಾಗಿ ಕೆಲಸ ಮಾಡಿದ್ದರು. ಆದರೆ ಈಗ ಲಖನ್ ಕಾಂಗ್ರೆಸ್ ಗೆ ಕೈ ಕೊಟ್ಟು ಕಮಲವನ್ನು ಮುಡಿಗೇರಿಸಿಕೊಳ್ಳಲು ಸಜ್ಜಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *