ರಾಜ್ಯ

ಲಂಡನ್ ನಿಂದ ರಾಜ್ಯಕ್ಕೆ ಬಂದಿಳಿದ ಮೊದಲ ವಿಮಾನ : 326 ಅನಿವಾಸಿ ಭಾರತೀಯರ ಆಗಮನ

ಬೆಂಗಳೂರು prajakiran.com : ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶಾದ್ಯಂತ ತಾತ್ಕಲಿಕವಾಗಿ ವಿಮಾನಯಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು.

ಆದರೆ ಅಲ್ಲಿಯ ಸರಕಾರಗಳು ಅನಿವಾಸಿ ಭಾರತೀಯರನ್ನು ಕರೆದುಕೊಂಡು ಹೋಗುವಂತೆ ಸೂಚಿಸಿದ್ದರಿಂದಅವರ ಆಗಮನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿತ್ತು.

ಅದರಂತೆ ಲಂಡನ್ ನಲ್ಲಿರುವ ಅನಿವಾಸಿ ಭಾರತೀಯರನ್ನು ಹೊತ್ತು ತಂದ ವಿಮಾನವು ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿಯಲ್ಲಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

    ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ, ಲಂಡನ್ ನಿಂದ ರಾಜ್ಯಕ್ಕೆ ಬಂದಿಳಿದ ಮೊದಲ ವಿಮಾನದಲ್ಲಿ ಮಕ್ಕಳು ಸೇರಿದಂತೆ ಒಟ್ಟು 326 ಪ್ರಯಾಣಿಕರು ಆಗಮಿಸಿದ್ದಾರೆ. 

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು.

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರೂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿದೆ.

ಹೀಗಾಗಿ ಹೋಟೆಲ್ ಗಳನ್ನು ಬಳಸಲಾಗುತ್ತಿದ್ದು, ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಲಂಡನ್ ನಿಂದ ಲಂಡನ್ ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದ ಎಲ್ಲಾ 326 ಪ್ರಯಾಣಿಕರನ್ನು ಕಡ್ಡಾಯ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಮುಂದಿನ 14 ದಿನಗಳಲ್ಲಿ ಪ್ರತಿಯೊಬ್ಬರನ್ನು 2 ಬಾರಿ ಪರೀಕ್ಷಿಸಲಾಗುವುದು.

ಪ್ರಯಾಣಿಕರಲ್ಲಿ ಯಾರಿಗೂ ರೋಗಲಕ್ಷಣ ಕಂಡುಬಂದಿಲ್ಲ, ಎಲ್ಲರ ಸ್ವಾಬ್ ಸಂಗ್ರಹಿಸಿ ಸಮಗ್ರ ತಪಾಸಣೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *