ಜಿಲ್ಲೆ

ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ನೇರ ವೀಕ್ಷಣೆಗೆ ಧಾರವಾಡದ 243 ಸ್ಥಳಗಳಲ್ಲಿ ಟಿ.ವಿ, ಎಲ್.ಇ.ಡಿ. ಪರದೆಗಳ ವ್ಯವಸ್ಥೆ

ಧಾರವಾಡ ಪ್ರಜಾಕಿರಣ.ಕಾಮ್  ಆ.29: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ.

ಧಾರವಾಡ ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆ ಇರುವ ಒಟ್ಟು 4,04,848 ಪಡಿತರ ಕಾರ್ಡ್‍ಗಳ ಪೈಕಿ ಅದರಲ್ಲಿ 3,40,199 ಫಲಾನುಭವಿಗಳು (ಶೇ.84) ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ.

ಆಗಸ್ಟ 30, 2023 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಮುಖ್ಯಮಂತ್ರಿಗಳು ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು.

ಈ ಕಾರ್ಯಕ್ರಮದಲ್ಲಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಲು ಧಾರವಾಡ ಜಿಲ್ಲೆಯಿಂದ ಹೆಬ್ಬಳ್ಳಿ ಗ್ರಾಮ ಪಂಚಾಯತಿ ಸಭಾಭವನ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪರವಾಗಿ ನವಲಗುಂದ ಪಟ್ಟಣದ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮವನ್ನು ವಿಕ್ಷೀಸಲು ಮತ್ತು ಎಲ್ಲಾ ಫಲಾನುಭವಿಗಳು ಭಾಗಿಯಾಗಲು ಅನುವಾಗುವಂತೆ ಜಿಲ್ಲೆಯ ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ವಾರ್ಡಗಳಲ್ಲಿನ 98 ಸ್ಥಳಗಳಲ್ಲಿ ಹಾಗೂ 145 ವಿವಿಧ ಗ್ರಾಮ ಪಂಚಾಯತಿಗಳ ಸಭಾಭವನ ಸೇರಿದಂತೆ ಒಟ್ಟು ಧಾರವಾಡ ಜಿಲ್ಲೆಯ 243 ಸ್ಥಳಗಳಲ್ಲಿ ಕಾರ್ಯಕ್ರಮ ವೀಕ್ಷಿಸಲು ಟಿ.ವಿ, ಎಲ್.ಇ.ಡಿ ಪರದೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *