ಬೆಂಗಳೂರು ಪ್ರಜಾಕಿರಣ.ಕಾಮ್ :
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ಇಂದು ಸಂಜೆ 5.30ರ ಸುಮಾರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು.
ಅವರು ಕಳೆದ ಕೆಲ ದಿನಗಳಿಂದ
ವಯೋಸಜಹ ಕಾಯಿಲೆಯಿಂದ ಬಳಲುತ್ತಿದ್ದರು.
ಅವರ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಮಗ ವಿನೋದ ರಾಜ್ ಹಾಗೂ ಹಿರಿಯ ನಟ ಶಿವರಾಜ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.
ಅವರು ಸುಮಾರು 600ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದರು. ಅವರು ಡಾ. ರಾಜಕುಮಾರ, ಉದಯಕುಮಾರ, ಕಲ್ಯಾಣಕುಮಾರ್, ವಿಷ್ಣುವರ್ಧನ್, ಅಂಬರೀಶ್, ಟೈಗರ್ ಪ್ರಭಾಕರ ಸೇರಿದಂತೆ ಹಲವು ನಾಯಕ ನಟರ ಜೊತೆಗೆ ನಾಯಕಿಯಾಗಿ ನಟಿಸಿದ್ದರು.
ತೆಲಗು, ತಮಿಳು, ಮಲೆಯಾಳಂದಲ್ಲಿ 200ಕ್ಕೂ ಹೆಚ್ಚು ಪರಭಾಷೆ ಸಿನಿಮಾದಲ್ಲಿ ನಟಿಸಿದ್ದರು.
ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನವನ್ನು ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಇಡಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದೆ.
ವಿಐಪಿ, ವಿವಿಐಪಿ, ನಟರು, ರಾಜಕೀಯ ನಾಯಕರ ಅಂತಿಮ ದರ್ಶನದ ನಂತರ ನಾಳೆ ಸಂಜೆ ಅವರ ತೋಟದ ಮನೆಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು
ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡದ ಕೋಟ್ಯಾಂತರ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಅವರು ಇನ್ನು ನೆನಪು ಮಾತ್ರ.