ರಾಜ್ಯ

ಪಂಚಮಸಾಲಿ ಸಮಾಜದ ಮೀಸಲಾತಿಗೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರ ಮುಖ್ಯಮಂತ್ರಿ ಭರವಸೆ

ಬೆಂಗಳೂರು prajakiran.com : ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2 ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಹಕ್ಕೊತ್ತಾಯಕ್ಕೆ ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಗುರುವಾರ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ನಿಯೋಗಕ್ಕೆ ಸಕಾರಾತ್ಮಕ ಭರವಸೆ ನೀಡಿದ್ದಾರೆ.

ಪಂಚಮಸಾಲಿ ಸಮಾಜದ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಸ್ವಾಮೀಜಿ ಅಕ್ಟೋಬರ್ 28ರಂದು ಬೆಳಗಾವಿಯ ಸುವರ್ಣವಿಧಾನಸೌಧದ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದರು.

ಮುಖ್ಯಮಂತ್ರಿಗಳು ಫೋನ್ ಮೂಲಕ ಉಪವಾಸ ಕೈಬಿಡುವಂತೆ ಸಂಪರ್ಕಿಸಿದಾಗ , ನವಂಬರ್ 28 ರ ಒಳಗಾಗಿ ಸರ್ಕಾರ ಸ್ಪಂದಿಸಬೇಕು ಎಂಬ ಕಾಲಮಿತಿಯನ್ನು ಸಿಎಂ ಒಪ್ಪಿದ ಮೇಲೆ ಶ್ರೀಗಳು ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದರು.

ಅದರಂತೆ ಗುರುವಾರ ಭೇಟಿ ಮಾಡಿದಾಗ ಮುಖ್ಯಮಂತ್ರಿಗಳು ಕೆಲವೇ ದಿನಗಳಲ್ಲಿ ಒಳ್ಳೆಯ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಇದೀಗ ಮುಖ್ಯಮಂತ್ರಿ ಬಿ ಎಸ್ ವೈ ನಿರ್ಧಾರಕ್ಕೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದೆ ಎಂದು ಹೇಳಲಾಗುತ್ತಿದೆ.

ಆದರೆ ಸಿಎಂ ಸಚಿವ ಸಂಪುಟದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈ ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎನಾಗುತ್ತದೆ ಎಂಬುದು ಕಾದು ನೋಡಬೇಕು

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *