ಅಪರಾಧ

ಶಹಾಪುರದಲ್ಲಿ ಲಾಡ್ಜ್ ಮೇಲೆ ಖಾಕಿ ದಾಳಿ : ಅಕ್ರಮ ಮದ್ಯದ ದಾಸ್ತಾನು ವಶ

ಯಾದಗಿರಿ prajakiran.com  : ಲಾಡ್ಜ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದಅಪಾರ ಪ್ರಮಾಣದ ಮದ್ಯವನ್ನು ವಶಪಡಿಸಿಕೊಂಡ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಇಡೀ ಯಾದಗಿರಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಶಹಾಪುರದ ವೈಷ್ಣವಿ ಲಾಡ್ಜ್ ನಲ್ಲಿ ಮದ್ಯವನ್ನು ಅಕ್ರಮ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವ ಜಾಡು ಹಿಡಿದು ಪೊಲೀಸರು ದಾಳಿ ನಡೆಸಿದ್ದಾರೆ.

ರಾಜಾರೋಷವಾಗಿ  ಮದ್ಯದ ವ್ಯಾಪಾರ ನಡೆಸಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಯಾದಗಿರಿ ಜಿಲ್ಲೆ ಶಹಾಪುರ ನಗರದ ವೈಷ್ಣವಿ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದ್ದು, 2 ಲಕ್ಷ ರೂಪಾಯಿ ಮೌಲ್ಯದ ಮದ್ಯದ ಬಾಟಲಿಗಳನ್ನು ಜಪ್ತಿ ಮಾಡುವ ಮೂಲಕ , ಒಬ್ಬನನ್ನು ಬಂಧಿಸಲಾಗಿದೆ.

ಸುರಪುರ ಉಪವಿಭಾಗದ ಡಿವೈಎಸ್ ಪಿ ವೆಂಕಟೇಶ ಹೊಗಿಬಂಡಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು,  ದಾಳಿ ವೇಳೆ ಪರಾರಿಯಾದ ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ವರದಿ : ರಾಘವೇಂದ್ರ ಮಾಸ್ತರ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *