ರಾಜ್ಯ

ಧಾರವಾಡ ಜಿಲ್ಲೆಯ ಲಾಕ್ ಡೌನ್ ರದ್ದು ಮಾಡಿದ ಜಿಲ್ಲಾಧಿಕಾರಿ

ಧಾರವಾಡ prajakiran.com : ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ ಬೆನ್ನಲ್ಲೇ  ಧಾರವಾಡ ಜಿಲ್ಲೆಯಲ್ಲಿಯೂ

ಜುಲೈ 22 ರಿಂದ ಲಾಕ್ ಡೌನ್ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಕೊರೊನಾ ಸೋಂಕು ವ್ಯಾಪಿಸಿರುವ ಪ್ರದೇಶಗಳಲ್ಲಿ  ಸೀಲ್ ಡೌನ್ ಘೋಷಿಸಲ್ಪಟ್ಟಿರುವ ವಲಯಗಳಲ್ಲಿ ಮಾತ್ರ ನಿರ್ಬಂಧಗಳು ಮುಂದುವರೆಯಲಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಉಳಿದಂತೆ ಜನಜೀವನ ,ಸಾರಿಗೆ ಸಂಚಾರ , ವಾಣಿಜ್ಯ,ವ್ಯವಹಾರ ಚಟುವಟಿಕೆಗಳು ಎಂದಿನಂತೆ ನಡೆಯಲಿವೆ . ಸಾರ್ವಜನಿಕರು ಸಾಮಾಜಿಕ ಅಂತರ ಮತ್ತಿತರ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಡಳಿತದ ನಿರ್ಧಾರಕ್ಕೆ ಜಿಲ್ಲೆಯ ಜನತೆ ಪರ ಹಾಗೂ ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ತಮ್ಮಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಒಂದಿಷ್ಟು ಜನ ಪ್ರಕರಣ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಮುಂದುವರೆಸಬೇಕಿತ್ತು ಎಂದು ಹೇಳಿದರೆ,ಇನ್ನೋಂದಿಷ್ಟು ಜನ ಲಾಕ್ ಡೌನ್ ಕೈಬಿಟ್ಟಿರುವುದು ವ್ಯಾಪಾರ ವಹಿವಾಟು ನಡೆಸಲು

ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *