ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಲಾಕ್ ಡೌನ್ ಉಲ್ಲಂಘಿಸಿದ 265 ವಾಹನ ಸೀಜ್

ಧಾರವಾಡ prajakiran.com : ಜಿಲ್ಲೆಯಾದ್ಯಂತ ಕರೋನಾ ಉಲ್ಭಣಿಸಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೂ ಜನ ರಸ್ತೆಗೆ ಇಳಿಯುತ್ತಿರುವುದು ಮಾತ್ರ ಕಡಿಮೆಯಾಗುತ್ತಿಲ್ಲ.

ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕು ಧಾರವಾಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘಿಸಿ ಸಂಚರಿಸಿರುವ 265 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವರ್ತಿಕಾ ಕಟಿಯಾರ್ ಅವರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.  

ಅಲ್ಲದೆ, ಈವರೆಗೆ 26,500 ದಂಡ ವಿಧಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಈವರೆಗೆ ಮಾಸ್ಕ ಧರಿಸದಿರುವುದಕ್ಕೆ   385 ಜನರಿಂದ 38,700 ದಂಡ ಹಾಕಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಒಟ್ಟು  7 ಪೊಲೀಸ್ ಚೆಕ್ ಪೋಸ್ಟ್ ಗಳಿವೆ. ಜಿಲ್ಲೆಯ ಜನತೆ ಅನಗತ್ಯವಾಗಿ ಹೊರ ಬರದೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನಿಯಮ ಉಲ್ಲಂಘಿಸಿ ಬೀದಿಗೆ ಬಂದರೆ ವಾಹನ ಸೀಜ್ ಹಾಗೂ ದಂಡ ತೆರಬೇಕಾಗುತ್ತದೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಎಚ್ಚರಿಕೆ ನೀಡಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *