ನವದೆಹೆಲಿ prajakiran.com : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕಡಿಮೆಯಾಗದ ಕಾರಣ ದೆಹಲಿಯಲ್ಲಿ ಲಾಕ್ಡೌನ್ ಮುಂದುವರಿಸಿದ್ದಾರೆ.
ಮೇ.17ರವರೆಗೆ ಲಾಕ್ಡೌನ್ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.
ಈ ವೇಳೆ ಮೆಟ್ರೋ ಸಂಚಾರ ಕೂಡ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರದ ರಾಜಧಾನಿ ನವದೆಹಲಿ ಕರೋನಾದಿಂದ ಬಳಲುತ್ತಿದ್ದು, ಅದರ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತಿಲ್ಲ.
ಹೀಗಾಗಿ ಮತ್ತೆ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ್ದು, ಇದರಿಂದಾಗಿ ನಿಯಂತ್ರಣ ಸಾಧಿಸಲು ಸಾಧ್ಯವಾಗುತ್ತಾ ಎಂಬುದು ಕಾದುನೋಡಬೇಕು.