ಅಪರಾಧ

ಯಲ್ಲಾಪುರ ಬಳಿ ಲಾರಿ – ಕಾರ್ ನಡುವೆ ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಯಲ್ಲಾಪುರ (ಕಾರವಾರ) : ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.

ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಬಳಿಯಲ್ಲಿ ಹೊಸಳ್ಳಿ ಗಾಂವ ಠಾಣಾ ಕ್ಕೆ ಹೋಗುವ ಕ್ರಾಸ್ ಬಳಿ ಈ ರ್ದುಘಟನೆ ನಡೆದಿದೆ.

ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ‌ ನೋಂದಣಿಯನ್ನು ಹೊಣಂದಿರುವ ಕಾರು ಹಾಗೂ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಮಹಾರಾಷ್ಟ್ರ ನೊಂದಣಿಯ ಲಾರಿಯ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.

ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟವರಾಗಿದ್ದಾರೆ. ಪುಷ್ಪಾ ನಾಯರ್ ಎಂಬುವವರ ಹೆಸರಿನಲ್ಲಿ ಅಪಘಾತಗೊಂಡ ಕಾರಿನ ನೊಂದಣಿ ಇದೆ ಎನ್ನಲಾಗಿದ್ದು, ಕಾರು ಕೇರಳಕ್ಕೆ ತೆರಳುತ್ತಿರಬಹುದೆಂದು ಶಂಕಿಸಲಾಗಿದೆ.

ಪೋಲಿಸರು ಘಟನಾ ಸ್ಥಳಕ್ಕೆ ತೆರಳಿದ್ದು, ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *