ಧಾರವಾಡ prajakiran.com : ಧಾರವಾಡ ಬೈಪಾಸ್ ರಸ್ತೆಯಲ್ಲಿ ಗೂಡ್ಸ್ ತೆಗೆದುಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದೆ.
ಇದರಿಂದಾಗಿ ಸ್ಥಳದಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಧಾರವಾಡದ ಮನಸೂರು ಬ್ರಿಡ್ಜ್ ಬೈಪಾಸ್ ಬಳಿ ಈ ಘಟನೆ ನಡೆದಿದ್ದು,
ಬೆಂಕಿ ನಂದಿಸಲು ಧಾರವಾಡ ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಧಾರವಾಡ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು.
ಏಕಾ ಏಕಿ ಗೂಡ್ಸ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು ಲಾರು ಹೊತ್ತಿ ಉರಿಯಲು ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಪೋಲಿಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.