ಜಿಲ್ಲೆ

ಮಾ.28 ರಿಂದ ಏ.4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ

ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿರ್ಭಂಧಿತ ಪ್ರದೇಶ ಆದೇಶ

ಧಾರವಾಡ prajakiran. com ಮಾ.23: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳನ್ನು ಧಾರವಾಡ ಜಿಲ್ಲೆಯ ವಿವಿಧ ಸ್ಥಳಗಳಲ್ಲಿನ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.

ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷೆಗಳನ್ನು ಶಾಂತಯುತವಾಗಿ, ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಒಟ್ಟು 52 ಪರೀಕ್ಷಾ ಕೇಂದ್ರಗಳ ಸುತ್ತಲೂ ಪರೀಕ್ಷಾ ಅವಧಿಯಲ್ಲಿ 200 ಮೀಟರ ಪ್ರದೇಶವನ್ನು ನಿಭರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

*ಝೆರಾಕ್ಸ್ ಕೇಂದ್ರಗಳು ಕಾರ್ಯನಿರ್ವಹಿಸಲು ನಿರ್ಭಂಧ:* ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರೀಲ್ 4 ರವರೆಗೆ ಪರೀಕ್ಷೆಯ ವೇಳಾಪತ್ರಿಕೆಯ ಅನುಸಾರವಾಗಿ ಪ್ರತಿ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯೊಳಗಿನ ಎಲ್ಲ ಝೆರಾಕ್ಸ್ ಕೇಂದ್ರಗಳು ಆಯಾ ದಿನದ ಬೆಳಗಿನ ಮತ್ತು ಅಪರಾಹ್ನದ ಪರೀಕ್ಷಾ ಅವಧಿಯಲ್ಲಿ ಮಾತ್ರ ಕಾರ್ಯನಿರ್ವಹಿಸದಂತೆ ನಿರ್ಭಂದಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *