ಹುಬ್ಬಳ್ಳಿ prajakiran.com : ಕಳೆದ ಹಲವು ವರ್ಷಗಳ ಕಾಲ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ
ಮಾಜಿ ಮುಖ್ಯಮಂತ್ರಿ ಎಸ್.ಆರ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಶುಕ್ರವಾರ (ಇಂದು) ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಹುಬ್ಬಳ್ಳಿಯಲ್ಲಿ ನಡೆದ ಬೆಳಗಾವಿಯ ವಿಭಾಗಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಈ ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ಮಧು ಯಕ್ಷಿಗೌಡ, ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ, ಅಲ್ಲಂ ವೀರಭದ್ರಪ್ಪ ಹಾಗೂ ಮಧು ಬಂಗಾರಪ್ಪ ಅವರ ನೂರಾರು ಬೆಂಬಲಿಗರು ಹಾಜರಿದ್ದರು.