ಮುಂಬೈ Prajakiran.com : ಕೆಲವು ಸೋಂಕಿತರಲ್ಲಿ ಕಪ್ಪು ಶಿಲೀಂಧ್ರ ಸೋಂಕು ಕಂಡುಬಂದಿದೆ.
ಮ್ಯೂಕೋರ್ಮೈಕೋಸಿಸ್ ಎಂಬ ಅಪರೂಪದ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು ವೈದ್ಯರಲ್ಲಿಯೇ ಆತಂಕ ಮೂಡಿಸಿದೆ.
ಈ ಕಾರಣದಿಂದ ಮುಂಬೈನ ವೈದ್ಯಕೀಯ ಕಾಲೇಜುಗಳನ್ನು ಮ್ಯೂಕೋರ್ಮೈಕೋಸಿಸ್ ಚಿಕಿತ್ಸಾ ಕೇಂದ್ರಗಳಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಈ ಸೋಂಕು ತಗುಲಿದರೆ ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ದೃಷ್ಟಿ ಹೀನತೆ ಕಂಡುಬರುತ್ತದೆ.
ರಾಜ್ಯದಲ್ಲಿ ಸದ್ಯ 2000 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಕಂಡುಬಂದಿವೆ.
ಇನ್ನು ಮುಂದೆ ಕೋವಿಡ್ ಸೋಂಕಿನ ಪ್ರಮಾಣ ಕೂಡ ಜಾಸ್ತಿಯಾಗುವುದರಿಂದ ಆತಂಕಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.
ಮ್ಯೂಕೋರ್ಮೈಕೋಸಿಸ್ ರೋಗಿಗಳ ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಟೊಪೆ ಹೇಳಿದರು.