ಅಪರಾಧ

ಧಾರವಾಡದ ಮುರುಘಾಮಠದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ…..!

ಧಾರವಾಡ prajakiran.com : ಅನಾರೋಗ್ಯ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪ್ರತಿಷ್ಠಿತ ಮುರುಘಾಮಠದ ಆವರಣದಲ್ಲಿ ನಡೆದಿದೆ.

ತನ್ನ ಲುಂಗಿಯಿಂದ ನೇಣು ಬಿಗಿದುಕೊಂಡು ಕಾರಿನ ಶೆಡ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನೇಣಿಗೆ ಶರಣಾದ ವ್ಯಕ್ತಿ ಭರಮಪ್ಪ ಉಪ್ಪಾರ ಎಂದು ತಿಳಿದು ಬಂದಿದ್ದು, ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾಯಿಲೆಯಿಂದ ಗುಣಮುಖವಾಗದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *