ಜಿಲ್ಲೆ

ಮೇ. 17 ರಿಂದ 24 ರವೆರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಆಯೋಜನೆ ನಿಷೇಧಿಸಿ ಆದೇಶ

ಧಾರವಾಡ prajakiran.com : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮೇ.17 ರಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಶನಿವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೋರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸತತವಾಗಿ ಶ್ರಮಿಸುತ್ತಿದ್ದರೂ ಸಾರ್ವಜನಿಕರ ಸಹಕಾರದಿಂದ ಮಾತ್ರ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ.

ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಗ್ರಾಮ ಮಟ್ಟದಲ್ಲಿ ಕೋವಿಡ್ ಜನಜಾಗೃತಿ ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ.

ಬೇರೆ ಜಿಲ್ಲೆ,ನಗರ ಇತರ ಪ್ರದೇಶಗಳಿಂದ ವಲಸೆ ಬಂದವರು ಮುನ್ನಎಚ್ಚರಿಕೆ ವಹಿಸದೆ ಇರುವದರಿಂದ ಗ್ರಾಮಗಳಲ್ಲಿ ಕೋವಿಡ್ ಹೆಚ್ಚುವ ಸಾಧ್ಯತೆ ಇರುವದರಿಂದ ಮುಂಜಾಗೃತೆ ವಹಿಸಿ, ಅಗತ್ಯ ಕ್ರಮಕೈಗೊಳ್ಳುವ ಅಗತ್ಯವಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರ ಆರೋಗ್ಯ ಸುರಕ್ಷತೆ ಮುಖ್ಯವಾಗಿರುವದರಿಂದ ಬರುವ ಮೇ.17 ರಿಂದ 24 ರ ವರೆಗೆ ಜಿಲ್ಲೆಯಲ್ಲಿ ಮದುವೆ ಆಯೋಜನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮತ್ತು ಮೇ 17ರಿಂದ 24 ರ ವರೆಗೆ ಮದುವೆ ಆಯೋಜನೆಗಾಗಿ ಜಿಲ್ಲಾಧಿಕಾರಿಗಳ ಕಚೇರಿ ಅಥವಾ ತಹಸಿಲ್ದಾರ ಮತ್ತು ಪಾಲಿಕೆ ವಲಯ ಕಚೇರಯಿಂದ ಈಗಾಗಲೇ ಅನುಮತಿ ಪಡೆದದಿದ್ದರೂ ಸಹ ಅವುಗಳನ್ನು ನಿಷೇಧಿಸಲಾಗಿದೆ.

ಮತ್ತು ಮುಂದಿನ ಎಂಟು ದಿನಗಳ ವರಗಿನ ಸಮಯದಲ್ಲಿ ಈ ನಿಶೇಧಾಜ್ಞೆ ಉಲ್ಲಂಘಿಸಿ, ಮದುವೆ ಆಯೋಜಿಸಿದರೆ ಸಂಘಟಕರ ವಿರುಧ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 1987 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅನ್ವಯ ಪ್ರಕರಣ ದಾಖಲಿಸಿ, ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ನಿಷೇಧಾಜ್ಞೆ ಹೊರಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *