ಕೇರಳ prajakiran.com : ದೇಶದೆಲ್ಲೆಡೆ ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ಮೇ.8 ರಿಂದ 16 ರವರೆಗೆ ಕೇರಳ ಸಂಪೂರ್ಣ ಲಾಕ್ ಆಗಲಿದೆ.
ಈ ಕುರಿತು ಕೇರಳ ಮುಖ್ಯಮಂತ್ರಿ ವಿಜಯನ್ ಪಿಣರಾಯಿ ಸಾಮಾಜಿಕ ಜಾಲತಾಣವಾದ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೇ.8 ರಿಂದ 16 ರವರೆಗೆ ಸಂಪೂರ್ಣ ಲಾಕ್ಡೌನ್ ಜಾರಿಮಾಡಲಾಗಿದೆ ಎಂದಿದ್ದಾರೆ.
ಕೇರಳದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಲೇ ಇದ್ದು, ಒಂದೇ ದಿನ 41,953 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.