ರಾಜ್ಯ

ಪೇ ಮೇಯರ್ ಪೋಸ್ಟರ್ : ರಾಷ್ಟ್ರಪತಿ ಕಾರ್ಯಾಲಯ, ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ನಾಯಕರ ವಿರುದ್ದ ದೂರು ನೀಡಿದ ಮೇಯರ್

ಧಾರವಾಡ prajakiran.com : ರಾಷ್ಟ್ರಪತಿ ಕಾರ್ಯಕ್ರಮಕ್ಕೆ ನಾವು ಯಾವುದೇ ವೆಚ್ಚ ಮಾಡಿಲ್ಲ. ಆದರೂ ರಾಜಕೀಯ ಉದ್ದೇಶಕ್ಕಾಗಿ ಕಾರ್ಯಕ್ರಮ ಮುಗಿದ 24 ಗಂಟೆಗಳ ಒಳಗೆ ಈ ರೀತಿ ಪೋಸ್ಟರ್ ಹಾಕಿದ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ದ ರಾಷ್ಟ್ರಪತಿ ಕಾರ್ಯಾಲಯ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು.

ನನ್ನ ಮೊಬೈಲ್ ಗೆ ಪೋಸ್ಟ್ ಹಾಕಿದ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡ ದೀಪಕ ಚಿಂಚೋರೆ, ಫೇಸ್ ಬುಕ್ ಪೋಸ್ಟ್ ಹಾಕಿದ ಧಾರವಾಡ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಮಂಜುನಾಥ ನಡಟ್ಟಿ ಹಾಗೂ ಹುಬ್ಬಳ್ಳಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ವಿರುದ್ಧ ದೂರು ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದ್ದು ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದು ಕಾದು ನೋಡಬೇಕು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *