ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರ, ಉಪ ಮಹಾಪೌರ ಸ್ಥಾನಗಳಿಗೆ ಜೂನ್ 20 ರಂದು ಚುನಾವಣೆ

*ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ*
*ಜೂನ್ 20 ರಂದು ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆ*

ಧಾರವಾಡ ಪ್ರಜಾಕಿರಣ.ಕಾಮ್  ಜೂ.19: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ಚುನಾವಣೆಯನ್ನು ಜೂನ್ 20, 2023 ರಂದು ನಿಗದಿ ಪಡಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ (ಚುನಾವಣೆ)ಯ ಅಧ್ಯಕ್ಷಾಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 20, 2023 ರಂದು ಮುಂಜಾನೆ 9 ರಿಂದ 11 ಗಂಟೆಯವರೆಗೆ ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಮತ್ತು ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಲಾಗುವುದು.

ನಿಯಮಾವಳಿಯಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು 22ನೇ ಅವಧಿಯ ಚುನಾವಣೆಗೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿಯನ್ನು ನಿಗದಿಗೊಳಿಸಲಾಗಿದೆ.

ಮಹಾಪೌರ ಮತ್ತು ಉಪಮಹಾಪೌರ ಸ್ಥಾನಕ್ಕೆ ನಡೆಯುವ ಚುನಾವಣೆ ಪ್ರಕ್ರಿಯೆಯಲ್ಲಿ ಸ್ವೀಕರಿಸಿದ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು

ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡುವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು

ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ನಿಗದಿತ ಸಮಯಾನುಸಾರ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆಯ ಚುನಾವಣಾಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ತಿಳಿಸಿದ್ದಾರೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *