ಅಂತಾರಾಷ್ಟ್ರೀಯ

ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷೆ

ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅಧ್ಯಕ್ಷರಾಗಿ ನೇಮಕ

ಬೆಂಗಳೂರು ಪ್ರಜಾಕಿರಣ. ಕಾಮ್ : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.

ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.

ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ.

ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲ್ಬುರ್ಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.

ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರೆ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.

ಹಾಗೆಯೇ ಜನಪರ ಹೋರಾಟದಿಂದಲೇ ಪತ್ರಿಕೋದ್ಯಮಕ್ಕೆ ಪ್ರವೇಶಿಸಿ ಸಾಮಾಜಿಕ ಕಾಳಜಿಗಳನ್ನಿಟ್ಟುಕೊಂಡು ವೃತ್ತಿಯಲ್ಲಿ ತೊಡಗಿರುವ ಚಿತ್ರದುರ್ಗದ ಅಹೋಬಳಪತಿ ಅವರ ಜೊತೆಗೆ ಬೆಂಗಳೂರಿನ ಪತ್ರಿಕಾ ಛಾಯಾಗ್ರಾಹಕರಾದ ಕೆ.ವೆಂಕಟೇಶ್ ಮತ್ತು ಕೊಪ್ಪಳದ ಹಿರಿಯ ಪತ್ರಕರ್ತರಾದ ಕೆ.ನಿಂಗಜ್ಜ ಅವರನ್ನು ಅಕಾಡೆಮಿ ಸದಸ್ಯರನ್ನಾಗಿ ನೇಮಿಸಲಾಗಿದ್ದು. ಇಲ್ಲೂ ಕೂಡ ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯಕ್ಕೆ ಮನ್ನಣೆ ನೀಡಲಾಗಿದೆ.

ಈ ಮೂಲಕ ಇದೇ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಅಲಂಕರಿಸುತ್ತಿದ್ದಾರೆ.

ವೆಂಕಟೇಶ ಅವರು ಮಾನವೀಯ ಮೌಲ್ಯಗಳ ಬಗ್ಗೆ ಹಾಗೂ ಇನ್ನಿತರ ವಿಷಯಗಳ ಮೇಲೆ ಛಾಯಾಚಿತ್ರ ಪ್ರದರ್ಶನ ಮಾಡಿದ್ದಾರೆ.

ಇವರು ನಿರ್ಭಿಡೆಯ ಪತ್ರಿಕಾ ಛಾಯಾಗ್ರಹಕರು ಆದ 
ಅತೀ ಸರಳಜೀವಿ ವೆಂಕಟೇಶ  ರವರನ್ನು “ಕರ್ನಾಟಕ ಮಾಧ್ಯಮ ಅಕಾಡೆಮಿ”   ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಒಬ್ಬ ಪತ್ರಿಕಾ ಛಾಯಾಗ್ರಹಕರನ್ನು ಸದಸ್ಯರನ್ನಾಗಿ ನೇಮಿಸಿದ  ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್  ರವರಿಗೆ ನಾಡಿನ ಪತ್ರಿಕಾ ಛಾಯಾಗ್ರಹಕರು ಬಳಗದಿಂದ   ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *