ರಾಜ್ಯ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ವರದಿ ನೆಗೆಟಿವ್, ಪತ್ನಿ, ಮಗಳಿಗೆ ಪಾಸಿಟಿವ್




ಬೆಂಗಳೂರು prajakiran.com : ವಿಶ್ವದ ನೂರಾರು ದೇಶಗಳನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ವಿಷಜಾಲವನ್ನು ವಿಸ್ತರಿಸುತ್ತಲೇ ಸಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಂತೂ ಬೆಡ್ ಗಳೇ ಸಿಗುತ್ತಿಲ್ಲ.ಅನೇಕ ರೋಗಿಗಳು, ಸೋಂಕಿತರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸುತ್ತಿರುವ ಘಟನೆಗಳು ದಿನನಿತ್ಯ ವರದಿಯಾಗುತ್ತಲೇ ಇವೆ.

ಇಂತಹ ಸಂದರ್ಭದಲ್ಲಿಯೇ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ತಂದೆಗೂ ಕರೋನಾ ಸೋಂಕು ವ್ಯಾಪಿಸಿದ ಬೆನ್ನಲ್ಲೇ ಅವರ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಸ್ವತಃ ಸಚಿವರೇ ದೃಢಪಡಿಸಿದ್ದಾರೆ.



ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಕೆ. ಸುಧಾಕರ್ ಅವರು, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ಖಚಿತಪಡಿಸಿದ್ದಾರೆ.

ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡು ಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ ಎಂದು ವಿವರಿಸಿದ್ದಾರೆ.

ಆ ಮೂಲಕ ಐದು ಬಾರಿ ಗಂಟಲು ದ್ರವ ತಪಾಸಣೆ ಹಾಗೂ ರಕ್ತದ ಮಾದರಿ ಪರೀಕ್ಷಿಸಿಕೊಂಡ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ನೆಮ್ಮದಿಯ ನಿಟ್ಟುಸಿರು ಬಿಟ್ಟರು ಕೂಡ, ಅವರ ಕುಟುಂಬದ ಮೂವರಿಗೆ ಹಾಗೂ ಮನೆಯಅಡುಗೆ ಸಹಾಯಕನಿಗೆ ಕರೋನಾ ಸೋಂಕು ಹರಡಿರುವುದು ಅವರಿಗೆ ಚಿಂತೆಗೀಡು ಮಾಡಿದೆ ಎಂದರೆ ತಪ್ಪಾಗಲಾರದು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *