ಕೋಲ್ಕತಾ Prajakiran.com : ಕೋವಿಡ್ ಸೋಂಕು ತಗುಲಿ ಅದರಿಂದ ಗುಣಮುಖರಾಗಿದ್ದ ತೃಣಮೂಲ ಕಾಂಗ್ರೆಸ್ ಶಾಸಕ ಜಯಂತ್ ನಾಸ್ಕರ್ ಶನಿವಾರ ಕೋಲ್ಕತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಮೇ ತಿಂಗಳಿನಲ್ಲಿ ಶಾಸಕ ಜಯಂತ್ ಅವರಿಗೆ ಕೋವಿಡ್ 19 ದೃಢಪಟ್ಟಿದ್ದು, ಜೂ.18ಕ್ಕೆ ಪರೀಕ್ಷೆ ನಡೆಸಿದ ವೇಳೆ ವರದಿ ನೆಗೆಟಿವ್ ಬಂದಿದೆ.
ಗೋಸಾಬಾ ವಿಧಾನಸಭಾ ಕ್ಷೇತ್ರದ ಶಾಸಕ ಜಯಂತ್ ಅವರನ್ನು ಎಂಆರ್ ಬಂಗೂರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ದೀರ್ಘಕಾಲದ ಅನಾರೋಗ್ಯದಿಂದ ಅವರ ಶ್ವಾಸಕೋಶ ಹಾನಿಗೊಳಗಾಗಿತ್ತು ಎಂದು ಖಾಸಗಿ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.