ರಾಜ್ಯ

ಬೈಲಹೊಂಗಲ ಶಾಸಕರಿಗೂ ಕರೋನಾ ಪಾಸಿಟಿವ್….!

ಬೈಲಹೊಂಗಲ prajakiran,com : ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಕೂಡ ಮಹಾಮಾರಿ ಕರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ.

ಈ ನಡುವೆ ಬಿಜೆಪಿಯ ಬೈಲಹೊಂಗಲ ಶಾಸಕರಿಗೆ ಕರೋನಾ ಪಾಸಿಟಿವ್ ಇರುವುದು ದೃಢವಾಗಿದೆ.

ಇದರಿಂದಾಗಿ ಅವರ ಜೊತೆ ಸಭೆ ನಡೆಸಿದ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಹೋಂ ಕ್ವಾರಂಟೈನ್ ಆಗಿದ್ದಾರೆ.

ಕಳೆದ ಎರಡು ದಿನಗಳಿಂದ ಬೈಲ್ ಹೊಂಗಲ ಲಾಕ್ ಡೌನ್ ಹಿನ್ನಲೆಯಲ್ಲಿ ಸತತವಾಗಿ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಶಾಸಕರಿಗೆ ಕರೋನಾ ಬಂದಿರುವುದು ಅಧಿಕಾರಿಗಳಿಗೆ ಆತಂಕ ತಂದಿದೆ.

ಸಭೆಯಲ್ಲಿ ಅವರ ಸಂಪರ್ಕಕ್ಕೆ ಬಂದಿರುವ ಬೈಲ ಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಸೀಲ್ದಾರದೊಡ್ಡಪ್ಪ ಹೂಗಾರ್, ತಾಪಂ ಇಒ ಸುಭಾಷ್ ಸಂಪಗಾವಿ ಇವರು ಸದ್ಯ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.  

ಶನಿವಾರ ಒಂದೇ ದಿನ ಬೈಲ ಹೊಂಗಲ್ ತಾಲೂಕಿನ 24 ಜನರಿಗೆ ಕೊರೋನಾ  ದೃಢವಾಗಿದೆ ಎಂದು ಬೆಳಗಾವಿ ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *