ರಾಜ್ಯ

ಮಾಜಿ ಸಿಎಂ ಶೆಟ್ಟರ್ ಸಮ್ಮುಖದಲ್ಲಿಯೇ ಕೈ ಕೈ ಮಿಲಾಯಿಸಿದ ಬಿಜೆಪಿ ಶಾಸಕರು …..!?

ಹುಬ್ಬಳ್ಳಿ prajakiran.com : ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಂಬಂಧ ರಾಣೆಬೆನ್ನೂರ ಶಾಸಕ ಅರುಣ ಕುಮಾರ್ ಹಾಗೂ ಎಂಎಲ್ ಸಿ ಆರ್ ಶಂಕರ್ ನಡುವೆ ಮಾಜಿ ಸಿಎಂ ಸಮ್ಮುಖದಲ್ಲಿ ಗಲಾಟೆ ನಡೆದಿದೆ.

ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ನಡೆದಿರುವುದು ಪಕ್ಷದ ಮುಖಂಡರಿಗೆ ಇರಿಸುಮುರಿದು ತಂದಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಈ ಗಲಾಟೆ ನಡೆದಿದೆ.

ಚುನಾವಣೆಯ ಉಸ್ತುವಾರಿ ಹಂಚಿಕೆ ವಿಚಾರದಲ್ಲಿ ಶುರುವಾದ ಗಲಾಟೆ ಮಾಜಿ‌ ಸಿಎಂ ಜಗದೀಶ ಶೆಟ್ಟರ್ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿಯೇ ನಡೆದರೂ ಶೆಟ್ಟರ್ ಮೌನಕ್ಕೆ ಜಾರಿದರು.
ಇದರಿಂದಾಗಿ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಅರುಣಕುಮಾರ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು
ಶಾಸಕ ಅರುಣಕುಮಾರ ಅವರನ್ನ ಸಮಾಧಾನ ಪಡಿಸುತ್ತಿದ್ದಾರೆ.

ಶಾಸಕರ ನಡುವೆ ಮಾತಿನ ಚಕಮಕಿ ಕುರಿತು ಶೆಟ್ಟರ್ ಪ್ರತಿಕ್ರಿಯೆ

ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಹಾಗೂ ಪಕ್ಷದ ನಾಯಕರ ಸಮ್ಮುಖದಲ್ಲಿ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ.
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಣೆಬೆನ್ನೂರ ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್ ಶಂಕರ್ ಮಧ್ಯೆ ಮಾತಿನ ಚಕಮಕಿ‌ ನಡೆದಿದೆ. ಗಲಾಟೆ ಆಗಿಲ್ಲ. ಅವರಿಬ್ಬರು ಕ್ಷೇತ್ರದ ವಿಚಾರದಲ್ಲಿ ಚರ್ಚೆ ಮಾಡುವ ವೇಳೆ ಮಾತಿನ ಚಕಮಕಿ ನಡೆದಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ಎನೂ ಆಗಿಲ್ಲ ಎಂದರು.

ಡಿಸೆಂಬರ್‌ ೧೦ರ ನಂತರ ಅವರಿಬ್ಬರ ಬಗ್ಗೆ ಪಕ್ಷದ‌ ನಾಯಕರು ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಿದ್ದಾರೆ. ಇಲ್ಲಿ ಯಾವುದೇ ನಾಯಕರ ಮಧ್ಯದಲ್ಲಿ ಮನಸ್ತಾಪ ಹಾಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟನೆ ನೀಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *